ಮೊನಚು ಹುಲ್ಲಿನ ಕೊನೆಯಲಿ
ಗಟ್ಟಿ ಹಿಡಿತದಿ ಕುಳಿತಿಹ
ಮುತ್ತಿನೋಪಾದಿಯಲಿಹಯಾವ ಕ್ಷಣದಲೂ
ಮಾಯವಾಗಬಹುದಾದನೀರ ಗುಳ್ಳೆ,
ಜೀವದ ಸಂಕೇತ
ಗರಿಕೆಯ ಒಣಗದಂತೆ ಕಾಪಾಡುವುದು
ದರ್ಪದ ತೋರಿಕೆಯ ಕೊಡುತಿಹುದು
ಈಗಿಹ ಗುಳ್ಳೆ ಇನ್ನೊಂದು ಕ್ಷಣ ಇರದಿರಬಹುದು
ಹಸುರು ಗರಿಕೆ ಒಣಹುಲ್ಲಾಗುವುದು
ಗುಳ್ಳೆ ಒಡೆಯಲೂಬಹುದು
ಆಸಕ್ತಿಯ ವಿರಕ್ತಿಗೊಳಿಸಬಹುದು
ಮುತ್ತಾಗಲೂಬಹುದು
ಮುಡಿಯೇರಬಹುದು
ರಾಗಕೆ ವಿರಾಗವ ತೋರುವುದು
ವಿರಾಗದಿ ತರಂಗವ ತೂರುವುದು
ಹುಟ್ಟಿಗೆ ಸಾವನು ತೋರಿಪುದು
ಜೀವ ಜೀವನ ಮರ್ಮವ ಜಗಕೆ ಸಾರುವುದು
ಬಿಳಿ ಬಣ್ಣಕೆ ಜೀವ ಕೊಡುವುದು
ಕಾಮನಬಿಲ್ಲನು ಸೃಷ್ಟಿಸಬಹುದು
ಜೀವರಾಶಿಗೆ ತಂಪೆರೆಯಬಹುದು
ಜ್ವಾಲೆಯ ನಂದಿಸಲೂ ತಿಳಿದಿಹುದು
ಆತನ ಕರುಣೆ ಇಲ್ಲದೇನಿಂತಿಲ್ಲ
ಈ ಹುಲ್ಲುನಿಲಲಾರದು – ಅಲ್ಲಾಡಲಾರದು
ಎಲ್ಲವೂ ಆತನ ಕರುಣೆಗೆ ಕಾದಿಹುದು
ಈ ಗುಳ್ಳೆ ತಿಳಿ ಹೇಳುತಿದೆ
ಜೀವನದ ಮರ್ಮ
ಅಂಟಿಯೂ ಅಂಟದಂತಿರು
ಇಂದಿಹುದು ಇಲ್ಲದಿಹುದು
ಮುಂದಿನ ಕ್ಷಣ ಇಲ್ಲದಿರಬಹುದು
2 replies on “ಸಂಕೇತ”
ಕವಿತೆ ಒಂದು ಸುಂದರ ಅನುಭವ ಕೊಟ್ಟಿತು….
Thanks & it is good
Pl. Send Kannada vachanagalu & devotional information.